Welcome to reportnowtv.in   Click to listen highlighted text! Welcome to reportnowtv.in
Friday, December 13, 2024
HomeSportsಕುಸ್ತಿಯಲ್ಲಿ ಸೋತು, ರಾಜಕೀಯದಲ್ಲಿ ಗೆದ್ದ ವಿನೇಶ್ ಫೋಗಟ್

ಕುಸ್ತಿಯಲ್ಲಿ ಸೋತು, ರಾಜಕೀಯದಲ್ಲಿ ಗೆದ್ದ ವಿನೇಶ್ ಫೋಗಟ್

Vinesh Phogat: ವಿನೇಶ್ ಫೋಗಟ್ ಅವರು ಭಾರತಕ್ಕಾಗಿ ಹಲವು ಪದಕಗಳನ್ನು ಗೆದ್ದುಕೊಟ್ಟಿದ್ದಾರೆ. 2022ರ ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಚಿನ್ನದ ಪದಕಕ್ಕೆ ಕೊರೊಳೊಡ್ಡಿದ್ದ ಫೋಗಟ್, ಅದೇ ವರ್ಷ ನಡೆದ ವಿಶ್ವ ಚಾಂಪಿಯನ್‌ಶಿಪ್​ನಲ್ಲಿ ಕಂಚಿನ ಪದಕವನ್ನು ಗೆದ್ದುಕೊಂಡಿದ್ದರು. ಇದಕ್ಕೂ ಮುನ್ನ 2018ರ ಏಷ್ಯನ್ ಗೇಮ್ಸ್​ನಲ್ಲಿ ಬಂಗಾರದ ಪದಕದೊಂದಿಗೆ ತ್ರಿವರ್ಣ ಧ್ವಜವನ್ನು ಮುಗಿಲೆತ್ತರಕ್ಕೇರಿಸಿದ್ದರು.

ಭಾರತದ ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ರಾಜಕೀಯ ಅಖಾಡದಲ್ಲಿ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ. ಅದು ಸಹ ಬಿಜೆಪಿ ನಾಯಕ ಯೋಗೇಶ್ ಕುಮಾರ್ ಅವರನ್ನು 6,015 ಮತಗಳ ಅಂತರದಿಂದ ಸೋಲಿಸುವ ಮೂಲಕ ಎಂಬುದು ವಿಶೇಷ.

ಈ ಗೆಲುವಿಗೂ ಮುನ್ನ ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಸೋತಿದ್ದರು ಎಂಬುದು ಇಲ್ಲಿ ಉಲ್ಲೇಖಾರ್ಹ. ಫ್ರಾನ್ಸ್​ನಲ್ಲಿ ನಡೆದ ಈ ಬಾರಿ ಒಲಿಂಪಿಕ್ಸ್​ನಲ್ಲಿ 50 ಕೆ.ಜಿ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಕಣಕ್ಕಿಳಿದಿದ್ದ ಫೋಗಟ್ ಎಲ್ಲರನ್ನು ಮಕಾಡೆ ಮಲಗಿಸಿ ಫೈನಲ್​ಗೆ ಪ್ರವೇಶಿಸಿದ್ದರು.

ಆದರೆ ದುರಾದೃಷ್ಟ, ಅಂತಿಮ ಹಣಾಹಣಿಗೂ ಮುನ್ನ ನಡೆದ ದೇಹ ತೂಕದ ಪರೀಕ್ಷೆಯಲ್ಲಿ ಅನುಮತಿಸಲಾದ ತೂಕಕ್ಕಿಂತ 100 ಗ್ರಾಂ ಹೆಚ್ಚಿರುವುದು ಕಂಡುಬಂದಿದೆ. ಒಲಂಪಿಕ್ಸ್‌ನಲ್ಲಿ ಕುಸ್ತಿ ನಿಯಮಗಳ ಪ್ರಕಾರ, ಯಾವುದೇ ಕುಸ್ತಿಪಟು ಹೆಚ್ಚಿನ ತೂಕವನ್ನು ಹೊಂದಿದ್ದರೆ ಅವರನ್ನು ಇಡೀ ಪಂದ್ಯಾವಳಿಯಿಂದ ಅನರ್ಹಗೊಳಿಸಲಾಗುತ್ತದೆ. ಅದರಂತೆ 50 ಕೆ.ಜಿ ವಿಭಾಗದಲ್ಲಿ 100 ಗ್ರಾಂ ಹೆಚ್ಚು ತೂಕ ಹೊಂದಿದ್ದ ವಿನೇಶ್ ಫೋಗಟ್ ಅವರನ್ನು ಫೈನಲ್ ಪಂದ್ಯಕ್ಕೂ ಮುನ್ನ ಅನರ್ಹಗೊಳಿಸಲಾಗಿತ್ತು.

ಈ ಅನರ್ಹತೆಯ ಬೆನ್ನಲ್ಲೇ ಬೆಳ್ಳಿ ಪದಕಕ್ಕಾಗಿ ವಿನೇಶ್ ಫೋಗಟ್ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯಕ್ಕೆ (ಸಿಎಎಸ್) ಮೇಲ್ಮನವಿ ಸಲ್ಲಿಸಿದ್ದರು. ಆದರೆ ಹಲವಾರು ದಿನಗಳ ಕಾಯುವಿಕೆಯ ನಂತರ ಅಂತಿಮವಾಗಿ ಅವರ ಮನವಿಯನ್ನು ಸಿಎಎಸ್ ಕೂಡ ತಿರಸ್ಕರಿಸಿತ್ತು. ಇದರೊಂದಿಗೆ ಒಲಿಂಪಿಕ್ಸ್ ಅಖಾಡದಲ್ಲಿ ಪದಕ ಗೆಲ್ಲುವ ಅವರ ಬಹುಕಾಲದ ಕನಸು ಕೂಡ ಕಮರಿತು.

ಈ ನೋವಿನ ಬೆನ್ನಲ್ಲೇ ಕುಸ್ತಿಗೆ ವಿದಾಯ ಹೇಳಿದ ಫೋಗಟ್ ರಾಜಕೀಯ ಅಂಗಳಕ್ಕೆ ಧುಮುಕ್ಕಿದ್ದರು. ಅದರಂತೆ ಈ ಬಾರಿಯ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಜೂಲಾನಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ವಿನೇಶ್ ಫೋಗಟ್ ಅವರು ಬಿಜೆಪಿ ಪ್ರತಿಸ್ಪರ್ಧಿ ಯೋಗೇಶ್ ಕುಮಾರ್ ಅವರನ್ನು 6,015 ಮತಗಳ ಅಂತರದಿಂದ ಸೋಲಿಸಿದ್ದಾರೆ. ಈ ಮೂಲಕ ರಾಜಕೀಯ ಅಂಗಳದಲ್ಲಿ ಗೆಲುವಿನ ನಗೆ ಬೀರಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
Click to listen highlighted text!