Welcome to reportnowtv.in   Click to listen highlighted text! Welcome to reportnowtv.in
Monday, December 2, 2024
Homebengaluruಬೆಂಗಳೂರು ಅಂಬೇಡ್ಕರ್ ಭವನದಲ್ಲಿ 75ನೇ ವರ್ಷದ ಸಂವಿಧಾನ ದಿನಾಚರಣೆ.

ಬೆಂಗಳೂರು ಅಂಬೇಡ್ಕರ್ ಭವನದಲ್ಲಿ 75ನೇ ವರ್ಷದ ಸಂವಿಧಾನ ದಿನಾಚರಣೆ.

ಬೆಂಗಳೂರು : ಅಂಬೇಡ್ಕರ್ ಭವನದಲ್ಲಿ 75ನೇ ವರ್ಷದ ಸಂವಿಧಾನ ದಿನಾಚರಣೆ.ವಿಶ್ವದ ಎಲ್ಲಾ ಸಂವಿಧಾನಗಳನ್ನು ಅಧ್ಯಯನ ಮಾಡಿದ ಬಳಿಕ ಅಂಬೇಡ್ಕರ್ ಅವರು ನಮ್ಮ ಅತ್ಯುನ್ನತವಾದ ಸಂವಿಧಾನವನ್ನು ರಚಿಸಿದ್ದಾರೆ. ಸಂವಿಧಾನದ ಧ್ಯೇಯೋದ್ದೇಶಗಳನ್ನು ನಾವು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ಯಾವುದೇ ಸರ್ಕಾರ, ಯಾವುದೇ ಪಕ್ಷ ಅಧಿಕಾರಕ್ಕೆ ಬಂದಾಗ ಸಂವಿಧಾನದ ಪ್ರಕಾರವೇ ನಡೆದುಕೊಳ್ಳಬೇಕು. ನಮ್ಮ ಸರ್ಕಾರ ಕೂಡ ಸಂವಿಧಾನದ ಆಶಯಗಳನ್ನು ಈಡೇರಿಸುವ ದಿಕ್ಕಿನಲ್ಲಿ ಹತ್ತು ಹಲವು ಭಾಗ್ಯಗಳನ್ನು ಜಾರಿ ಮಾಡಿದೆವು‌. ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ನೀಡುವ ಕಾರ್ಯಕ್ರಮಗಳನ್ನು ನಾವು ರೂಪಿಸಿ, ಜಾರಿ ಮಾಡಿದ್ದೇವೆ.

ಬಸವಣ್ಣನವರು 850 ವರ್ಷಗಳ ಹಿಂದೆಯೇ ಜಾತಿ ವ್ಯವಸ್ಥೆ ವಿರುದ್ಧ ಕರೆ ನೀಡಿದ್ದರು. ಆದರೆ ಇವತ್ತಿಗೂ ಜಾತಿ ಹೋಗಿಲ್ಲ. ಆರ್ಥಿಕ, ಸಾಮಾಜಿಕ ಸಮಾನತೆ ಬರದೆ ಜಾತಿ ವ್ಯವಸ್ಥೆ ಹೋಗಲು ಸಾಧ್ಯವಿಲ್ಲ. ಜಾತಿ ವ್ಯವಸ್ಥೆಯಿಂದಲೇ ಅಸಮಾನತೆ-ಮನುಷ್ಯ ತಾರತಮ್ಯ ಸೃಷ್ಟಿಯಾಗಿದೆ. ಆದ್ದರಿಂದ ಜಾತ್ಯಾತೀತರಾಗಿ ಮಕ್ಕಳನ್ನು ಬೆಳೆಸುವುದೇ ಸಂವಿಧಾನಕ್ಕೆ ನಾವು ಸಲ್ಲಿಸುವ ಅತ್ಯುನ್ನತ ಗೌರವ.

ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ 75ನೇ ವರ್ಷದ ಸಂವಿಧಾನ ದಿನಾಚರಣೆ ಹಾಗೂ ಪ್ರಜಾಪ್ರಭುತ್ವ ದಿನದ ಯಶಸ್ಸಿಗೆ ಶ್ರಮಿಸಿದ ಜಿಲ್ಲಾಧಿಕಾರಿಗಳು ಮತ್ತು ನಾಗರಿಕ ಸಂಘಟನೆಗಳ ಮುಖಂಡರಿಗೆ ಪ್ರಶಸ್ತಿ ಪತ್ರ ವಿತರಿಸಿದ ಮಾತನಾಡಿದ ಮುಖ್ಯಮಂತ್ರಿ, ನಮ್ಮ ದೇಶದಲ್ಲಿ ಸಂವಿಧಾನ ವಿರೋಧಿಗಳೂ ಇದ್ದಾರೆ. ಈ ಬಗ್ಗೆ ನಮಗೆ ಎಚ್ಚರಿಕೆ ಇರಬೇಕು. ಸಂವಿಧಾನ ಜಾರಿಗೆ ಹಿಂದೂ ಮಹಾ ಸಭಾದ ಸಾವರ್ಕರ್, ಗೋಳ್ವಾಳ್ಕರ್ , ಆರ್.ಎಸ್.ಎಸ್‌ ವಿರೋಧಿಸಿದ್ದರು. ಸಂವಿಧಾನ ವಿರೋಧಿಗಳು ಮತ್ತೆ ಮನುಸ್ಮೃತಿ ಜಾರಿಗೆ ಈಗಲೂ ಹುನ್ನಾರ ನಡೆಸುತ್ತಿದ್ದಾರೆ ಎಂದರು.

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ, ಸ್ವಾತಂತ್ರ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮ್ಮ ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿದ್ದು, ಸರ್ವರಿಗೂ ಸಮಾನತೆ ಒದಗಿಸಿದೆ. ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು ಎನ್ನುವ ಅಂಬೇಡ್ಕರ್ ಅವರ ಮಾತು ಇಂದಿಗೂ ಪ್ರಸ್ತುತ. ಭಾರತವನ್ನು ಸಂವಿಧಾನ ಎನ್ನುವ ಗ್ರಂಥ ರಕ್ಷಣೆ ಮಾಡುತ್ತಿದ್ದು, ಇಂತಹ ಮಹಾನ್ ಗ್ರಂಥವನ್ನು ನೀಡಿದ ಅಂಬೇಡ್ಕರ್ ಅವರ ಪುತ್ಥಳಿಗಳು ಇಂದು ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೂ ಇವೆ. ಇಡೀ ವಿಶ್ವಕ್ಕೆ ಭಾರತದ ಸಂವಿಧಾನ ಮಾದರಿಯಾಗಿದ್ದು, ಅದರ ಮೌಲ್ಯಗಳನ್ನು ಎತ್ತಿಹಿಡಿಯುವಂತೆ ಕರೆ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
Click to listen highlighted text!