Welcome to reportnowtv.in   Click to listen highlighted text! Welcome to reportnowtv.in
Monday, January 13, 2025
Homechikkaballapuraವಿಕಲಚೇತನರು ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷರು ಎ.ಗಜೇಂದ್ರ ತಿಳಿಸಿದರು.

ವಿಕಲಚೇತನರು ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷರು ಎ.ಗಜೇಂದ್ರ ತಿಳಿಸಿದರು.

ಚಿಕ್ಕಬಳಾಪುರ : ವಿಕಲಚೇತನರು ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಿಕಲಚೇತನರು ಮುಕ್ತವಾಗಿ ನಿಮಗೆ ಬೇಕಾದ ಸಾಧನ ಸಲಕರಣೆಗಳಿಗೆ ಅರ್ಜಿಯನ್ನು ಸಲ್ಲಿಸಿ ಎಂದು ನಗರಸಭೆ ಅಧ್ಯಕ್ಷರು
ಎ.ಗಜೇಂದ್ರ ತಿಳಿಸಿದರು.

ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಬಳ್ಳಾಪುರ ಜಿಲ್ಲೆ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಇವರಗಳ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ ವಿಕಲಚೇತನರು ಸರ್ಕಾರದಿಂದ ಬರುವ ಎಲ್ಲಾ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ ಹಾಗೂ ನಮ್ಮ ನಗರಸಭೆ ವ್ಯಾಪ್ತಿಯಲ್ಲಿ ಬರುವ ವಿಕಲಚೇತನರಿಗೆ 5% ಅನುದಾನದಲ್ಲಿ ಸಾಧನ ಸಲಕರಣೆಗಳನ್ನು ವಿತರಿಸಲು ಅರ್ಜಿಗಳನ್ನು ಸಲ್ಲಿಸಿ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ವಾಣಿಜ್ಯ ಮಳಿಗೆಗಳನ್ನು ಸಿದ್ಧಪಡಿಸಿದ್ದು, ಯಾರಾದರೂ ವಿಕಲಚೇತನರು ಜೀವನವನ್ನು ನಡೆಸಲು ವ್ಯಾಪಾರ ಮಾಡಲು ಆಸಕ್ತಿ ಇದ್ದರೆ ಅವರಿಗೆ ಮಳಿಗೆಗಳನ್ನು ನೀಡಲಾಗುವುದು ಎಂದು ತಿಳಿಸಿದರು.

ನಂತರ ಉಪ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವೆಂಕಟೇಶ್ ರೆಡ್ಡಿ ಮಾತನಾಡಿ ವಿಶ್ವ ವಿಕಲಚೇತನರ ದಿನಾಚರಣೆ ಪ್ರಯುಕ್ತ ಶುಭಾಶಯಗಳು ಕೋರುತ್ತಾ ವಿಕಲಚೇತನರಿಗೆ ಯಾವುದೇ ಸಮಸ್ಯೆ ಇರಲಿ ನೇರವಾಗಿ ಇಲಾಖೆಗೆ ಮಾಹಿತಿ ನೀಡಿ ಹಾಗೂ ಸರ್ಕಾರದಿಂದ ಬರುವ ಎಲ್ಲಾ ಸೌಲಭ್ಯಗಳನ್ನು ಕಳೆದುಕೊಳ್ಳಿ ಹಾಗೂ ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರದಿಂದ ಸಿಗುವ ಸೌಲಭ್ಯ ಪಡೆದುಕೊಳ್ಳಿ ಎಂದು ತಿಳಿಸಿದರು.

ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಅಧಿಕಾರಿ ಜಗದೀಶ್ ಎನ್. ಎಂ ಮಾತನಾಡಿ ಇಂದು ವಿಶ್ವ ವಿಕಲಚೇತನರ ದಿನಾಚರಣೆಯ ಶುಭಾಶಯಗಳು ಕೋರುತ್ತಾ ಜಿಲ್ಲಾಧ್ಯಂತ ಪ್ರತಿ ಒಂದನೇ ಬುಧವಾರ ಮತ್ತು ಮೂರನೇ ಬುಧವಾರ ಮನೆ ಮನೆಗೆ ಸರ್ಕಾರಿ ಸೇವೆ ಎಂದು ವಿಕಲಚೇತನರ ಮನೆಗೆ ಭೇಟಿ ನೀಡಿ ಸಾಧನ ಸಲಕರಣೆಗಳನ್ನು ವಿತರಿಸಲಾಗುವುದು.

ಹಾಗೂ
ವಿಕಲಚೇತನರ ಪುನರ್ವಸತಿ ಕೇಂದ್ರವು ಪಂಚಾಯತಿ ವ್ಯಾಪ್ತಿಯಲ್ಲಿ ಎಲ್ಲಾ ಶಿಬಿರಗಳನ್ನು ಮಾಡುತ್ತಿದ್ದು, ಕರ್ನಾಟಕ ರಾಜ್ಯ ವಿಶೇಷಚೇತನರ ವೇದಿಕೆಯ ಆಡಳಿತ ಮಂಡಳಿಯ ಸಹಯೋಗದೊಂದಿಗೆ ಶ್ರೀ ಸಾಯಿ ಇಂಟರ್ ನ್ಯಾಷನಲ್ ಚಾರಿಟಬಲ್ ಟ್ರಸ್ಟ್ ಸಂಸ್ಥೆಯ ವತಿಯಿಂದ ವಿಶೇಷಚೇತನರ ಅಭಿವೃದ್ದಿಯ ಪಥಕ್ಕಾಗಿ ಹಾಗೂ MRW, URW, VRW ಗಳಿಗೆ ಅರಿವು ಮೂಡಿಸುವ ಸಲುವಾಗಿ ರಾಜ್ಯದಲ್ಲೇ ಪ್ರಥಮ ಬಾರಿಗೆ ಇಂದು ಶ್ರೀ ಸಾಯಿ ಇ-ನ್ಯೂಸ್ ಪತ್ರಿಕೆಯನ್ನು ಬಿಡುಗಡೆಗೊಳಿಸುತ್ತಿದ್ದೇವೆ. ಹಾಗೂ ಮೊಬೈಲ್ ಡಿಡಿಆರ್ ಸಿ ವಾಹನಕ್ಕೆ ಚಾಲನೆ ನೀಡಿದ್ದೇವೆ.


ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ವತಿಯಿಂದ ಹಾಗೂ ವಿಶೇಷಚೇತನರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಂಘಸ೦ಸ್ಥೆಗಳು, ಕಾರ್ಯಕರ್ತರುಗಳು ಜಿಲ್ಲೆಯಲ್ಲಿ ಗುರುತಿಸಲಾಗುತ್ತಿರುವ ಅರ್ಹ ವಿಕಲಚೇತನರಿಗೆ ಅವಶ್ಯಕತೆ ಇರುವ ಸಾಧನ ಸಲಕರಣೆಗಳನ್ನು ವಿತರಿಸಲು ಇನ್ನೂ ಹೆಚ್ಚಿನ ಕಾರ್ಯಕ್ರಮಗಳೊಂದಿಗೆ ಡಿಡಿಆರ್‌ಸಿಯು ತಮ್ಮೊಂದಿಗೆ ಕೈಜೋಡಿಸಲಿದೆ.ಎಂದು ತಿಳಿಸಿದರು.

ಶ್ರೀ ಸಾಯಿ ಇಂಟರ್ ನ್ಯಾಷನಲ್ ಚಾರ್ಟಬಲ್ ಟ್ರಸ್ಟ್ ನ ಸ್ಥಾಪಕರು ಕೆ.ಎನ್ ಮೂರ್ತಿ ಮಾತನಾಡಿ ಜಿಲ್ಲಾಧ್ಯಂತ ಕೇಂದ್ರದ ವತಿಯಿಂದ ಮನೆ ಮನೆಗೆ ಭೇಟಿ ಮಾಡಿ ವಿಕಲಚೇತನರನ್ನು ಗುರುತಿಸಿ


ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರದ ವತಿಯಿಂದ ಸಾಧನ ಸಲಕರಣೆಗಳನ್ನು ವಿತರಿಸಲಾಗುವುದು ಹಾಗೂ ಕೇಂದ್ರದಲ್ಲಿ ಕೃತಕಾಂಗಗಳು ತಯಾರಿಸಿ ಅರ್ಹ ಫಲಾನುಭವಿಗಳಿಗೆ ವಿತರಿಸಲಾಗುವುದು. ವಿಕಲಚೇತನರು ಮುಕ್ತವಾಗಿ ಕೇಂದ್ರಕ್ಕೆ ಭೇಟಿ ನೀಡಬಹುದು ಎಂದು ತಿಳಿಸಿದರು.

ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರ ದಿಂದ ಆಯೋಜಿತಲಾದ ಎಲ್ಲಾ ಗಣ್ಯರಿಂದ ಶ್ರೀ ಸಾಯಿ ಇ-ನ್ಯೂಸ್ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.

ಈಚೆಗೆ ನಗರದ ಸರ್ ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ 2024-25ನೇ ಸಾಲಿನ ಜಿಲ್ಲಾಮಟ್ಟದ ವಿಕಲಚೇತನರ ಕ್ರೀಡಾಕೂಟದಲ್ಲಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಇದೇ ವೇಳೆ ಸಮಾಜ ಸೇವೆ, ಕ್ರೀಡಾ ಕ್ಷೇತ್ರ, ಶಿಕ್ಷಣ ಕೇತ್ರ, ಸ್ವಯಂ ಉದ್ಯೋಗ ಇತ್ಯಾದಿ ಕ್ಷೇತ್ರಗಳಲ್ಲಿ ಮಾಡಿರುವ ಗಣನೀಯ ಸೇವೆ ಗುರುತಿಸಿ ಸಾಧಕರಿಗೆ ಸನ್ಮಾನಿಸಲಾಯಿತು.

ಇನ್ನು ಈ ಸಂದರ್ಭದಲ್ಲಿನಗರಸಭೆ ಅಧ್ಯಕ್ಷರು ಎ ಗಜೇಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ವೆಂಕಟೇಶ್ ರೆಡ್ಡಿ, ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಅಧಿಕಾರಿ ಜಗದೀಶ್ ಎನ್. ಎಂ,ಸಿ ಡಿ ಪಿ ಓ ಗಂಗಾಧರಯ್ಯ, ಶ್ರೀ ಸಾಯಿ ಇಂಟರ್ ನ್ಯಾಷನಲ್ ಸಂಸ್ಥಾಪಕರು ಕೆ. ಎನ್ ಮೂರ್ತಿ, ಆಶಾಕಿರಣ ಗೋಪಾಲಯ್ಯ, ಪ್ರಜ್ಞಾ ಟ್ರಸ್ಟ್ ಮುಖ್ಯಸ್ಥರು ನಾಗರಾಜು, ನಿವೃತ್ತ ಸರ್ಕಾರಿ ನೌಕರರು ಶಾಂತರಸ ಎಂ. ಎನ್, ಯೋಜನಾಧಿಕಾರಿ ಅರುಣ್ ಕುಮಾರ್ ,ಜಿಲ್ಲಾ ಸಂಯೋಜಕರು ಶ್ರೀನಿವಾಸ್, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿ ಗಣೇಶ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಿಬ್ಬಂದಿಗಳು ಮತ್ತು DDRC ಸಿಬ್ಬಂದಿಗಳು ಹಾಗೂMRWs, URWs, VRWs, ಹಾಗೂ ವಿಕಲಚೇತನರು ಮತ್ತು ಸಾರ್ವಜನಿಕರು ಹಾಜರಿದ್ದರು.

ವರದಿ :ಮೋಹನ್ ಕುಮಾರ್ ಅರ್. ನೌ. ಟಿವಿ ಚಿಕ್ಕಬಳ್ಳಾಪುರ

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
Click to listen highlighted text!