ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಹುಜನ ಸಮಾಜ ಪಕ್ಷದ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ರವರನ್ನು ಅಪಮಾನಿಸಿರುವ ಕೇಂದ್ರದ ಗೃಹ ಸಚಿವ ಅಮಿತ್ ಷಾ ರವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಜಿಲ್ಲಾಡಳಿತ ಭವನದ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಬಹುಜನ ಸಮಾಜ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್.ನರಸಿಂಹಯ್ಯ ಮಾತನಾಡಿ, ಮನುವಾದಿ ಮನಸ್ಥಿತಿಯುಳ್ಳ ಅಮಿತ್ ಷಾ ರವರು ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವುದು ಅಂಬೇಡ್ಕರ್ ನೀಡಿದ ಸಂವಿಧಾನದ ಅಡಿಯಲ್ಲಿ ಎನ್ನುವುದನ್ಬು ಮರೆತು ಅಂಬೇಡ್ಕರ್ ರವರಿಗೆ ಅಪಮಾನವಾಗುವಂತೆ ಮಾತನಾಡಿರುವುದು ಹಾಗೂ ಶೋಷಿತ ಸಮುದಾಯಕ್ಕೂ ಮಾಡಿರುವ ಅವಮಾನವನ್ನು ಖಂಡಿಸುತ್ತೇವೆ.
ಅಮಿತ್ ಷಾ ರವರು ಈ ಹೋರಾಟವನ್ನು ಕೇವಲವಾಗಿ ಪರಿಗಣಿಸಿದ್ದೇ ಆದರೆ ಕೇಂದ್ರ ಸಚಿವ ಸಂಪುಟದಿಂದ ವಜಾ ಮಾಡುವವರೆಗೂ ವಿಶ್ರಮಿಸುವುದಿಲ್ಲಾ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಬಿ.ಎಸ್.ಪಿ ಪಕ್ಷದ ರಾಜ್ಯ ಕಾರ್ಯದರ್ಶಿ ಬಂಗಾರಪ್ಪ, ಜಿಲ್ಲಾ ಸಂಯೋಜಕರು ನಂಜಪ್ಪ, ಜಿಲ್ಲಾಧ್ಯಕ್ಷ ನರಸಿಂಹರಾಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೀನಾ ಕುಮಾರಿ, ಉಪಾಧ್ಯಕ್ಷ ನಾರಾಯಣಸ್ವಾಮಿ, ಖಜಾಂಚಿ ನರಸಿಂಹಮೂರ್ತಿ, ಹೊಸಕೋಟೆ ತಾಲ್ಲೂಕು ಅಧ್ಯಕ್ಷ ಬಲರಾಮ್, ದೇವನಹಳ್ಳಿ ತಾಲ್ಲೂಕು ಅಧ್ಯಕ್ಷ ರಾಮಾಂಜಿನಪ್ಪ, ಮಹಿಳಾ ಜಿಲ್ಲಾಧ್ಯಕ್ಷೆ ಜಯಲಕ್ಷ್ಮೀ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.