ದೇವನಹಳ್ಳಿ: ಡಿಸೆಂಬರ್ 15 ರಂದು ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡರ ಬಣದ ವತಿಯಿಂದ ಕನ್ನಡೋತ್ಸವ ಕಾರ್ಯಕ್ರಮವು ತಾಲ್ಲೂಕಿನ ಹುರಳಗುರ್ಕಿ ಗ್ರಾಮದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಆಗಮಿಸಲಿದ್ದು ಈ ಕಾರ್ಯಕ್ರಮ ಯಶಸ್ವಿಯಾಗಲು ಕನ್ನಡ ಮನಸುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಲು ಕೋರಲು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.
ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡರ ಬಣದ ರಾಜ್ಯ ಪ್ರಧಾನ ಸಂಚಾಲಕ ಬಿ.ಕೆ.ನಾರಾಯಣಸ್ವಾಮಿ ಮಾತನಾಡಿ, ಕನ್ನಡೋತ್ಸವ ಕಾರ್ಯಕ್ರಮವನ್ನು ತಾಲ್ಲೂಕು ದಂಡಾಧಿಕಾರಿ ಬಾಲಕೃಷ್ಣ ಉದ್ಘಾಟಿಸಲಿದ್ದು ರಾಜ್ಯ ಪದಾಧಿಕಾರಿಗಳು, ರಾಜಕೀಯ ಮುಖಂಡರು ಕನ್ನಡಪರ ಚಿಂತಕರು, ಹೋರಾಟಗಾರರು ಆಗಮಿಸುತ್ತಿದ್ದು ಎಲ್ಲಾ ಕನ್ನಡ ಮನಸ್ಸುಗಳು ಆಗಮಿಸಬೇಕು ಕನ್ನಡದ ಉಳಿವಿಗೆ ಮತ್ತು ಕನ್ನಡಿಗರ ಹಕ್ಕುಗಳ ಬಗ್ಗೆ ನಾರಾಯಣಗೌಡರು ತಿಳಿಸಲಿದ್ದಾರೆ ಹಾಗೂ ಕನ್ನಡ ಪರವಾದ ಹೋರಾಟಗಳಲ್ಲಿ ಭಾಗಿಯಾದ ಕೆಲ ನಾಯಕರನ್ನು ಗುರುತಿಸಿ ರಾಜ್ಯಾಧ್ಯಕ್ಷ ನಾರಾಯಣಗೌಡರಿಂದ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಮಾಡಲಿದ್ದೇವೆ ಎಂದು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೃಷ್ಣಪ್ಪ, ಕ.ರ.ವೇ ಜಿಲ್ಲಾಧ್ಯಕ್ಷ ಪುರುಷೋತ್ತಮ ಗೌಡ, ತಾಲ್ಲೂಕು ಅಧ್ಯಕ್ಷ ಅನಿಲ್ ಕುಮಾರ್, ಹುರಳುಗುರ್ಕಿ ಅಧ್ಯಕ್ಷ ರಾಜಣ್ಣ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಲೋಕೇಶ್ ಗೌಡ, ಮಹಿಳಾ ಘಟಕದ ಅಧ್ಯಕ್ಷೆ ನೇತ್ರಾ, ಸಾಂಸ್ಕೃತಿಕ ಘಟಕದ ಅಧ್ಯಕ್ಷ ಮಂಜುನಾಥ್ ಹಾಗೂ ಇನ್ನು ಹಲವು ಘಟಕಗಳ ಪದಾಧಿಕಾರಿಗಳು ಹಾಜರಿದ್ದರು.