ಕೃಷ್ಣರಾಜಪೇಟೆ : ಅವರು ಕೃಷ್ಣರಾಜಪೇಟೆ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ಆವರಣದಲ್ಲಿ ನೂತನವಾಗಿ ಆರಂಭವಾದ ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯವನ್ನು ಲೋಕಾರ್ಪಣೆ ಗೊಳಿಸಿ ಮಾತನಾಡಿದರು.
ಗ್ರಾಮಾಂತರ ಪ್ರದೇಶಗಳು ಸೇರಿದಂತೆ ನೂರಾರು ಕಿಲೋ ಮೀಟರ್ ದೂರದಿಂದ ಪಟ್ಟಣಕ್ಕೆ ವಿದ್ಯಾಭ್ಯಾಸಕ್ಕೆ ಆಗಮಿಸುವ ಬಡ ಹಾಗೂ ಮಧ್ಯಮ ವರ್ಗಕ್ಕೆ ಸೇರಿದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಊಟ ಮತ್ತು ವಸತಿ ನೀಡಿ ಆಸರೆಯನ್ನು ಒದಗಿಸುವ ವಿದ್ಯಾರ್ಥಿ ನಿಲಯಗಳು ಕೇಳಿದ್ದನ್ನೆಲ್ಲಾ ನೀಡುವ ಕಾಮಧೇನು ಕಲ್ಪವೃಕ್ಷವಿದ್ದಂತೆ. ಆದ್ದರಿಂದ ವಿದ್ಯಾರ್ಥಿಗಳು ಜೀವನದಲ್ಲಿ ಏನನ್ನಾದರೂ ಸಾಧನೆ ಮಾಡಲೇಬೇಕು ಎಂಬ ಛಲದಿಂದ ಕಷ್ಟಪಟ್ಟು ವ್ಯಾಸಂಗ ಮಾಡಿ,ವಿದ್ಯಾರ್ಥಿಗಳು ಮನಸ್ಸನ್ನು ಅಲ್ಲಿಂದಿಲ್ಲಿ ಹರಿಯಬಿಡದೆ ಏಕಾಗ್ರತೆಯಿಂದ ವ್ಯಾಸಂಗ ಮಾಡಿ ಸಾಧನೆ ಮಾಡಿ ಗುರು ಹಿರಿಯರು ಹಾಗೂ ತಂದೆ ತಾಯಿಗಳ ಕೀರ್ತಿಯನ್ನು ಬೆಳಗಬೇಕು ಎಂದು ಶಾಸಕ ಮಂಜು ಕಿವಿ ಮಾತು ಹೇಳಿದರು.
ವಿದ್ಯಾರ್ಥಿ ನಿಲಯದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಗೊರವಾಲೆ ನಾಗರಾಜ್, ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ಸುಷ್ಮಾ, ಕೃಷ್ಣರಾಜಪೇಟೆ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಎಂ.ಎಲ್.ವೆಂಕಟೇಶ್, ನಿಲಯಪಾಲಕರಾದ ಪ್ರದೀಪ್, ಜಗಧೀಶ್, ಚಿರಂಜೀವಿ, ಚೈತ್ರ, ಚಂದ್ರಶೇಖರ್, ಶ್ರುತಿ, ಪುಷ್ಪ, ಗೀತಾ, ಪ್ರಥಮ ದರ್ಜೆ ಸಹಾಯಕಿ ಕೆ.ಸವಿತ, ಮಧುಕುಮಾರ್, ಅನಿಲ್ ಕುಮಾರ್, ವಿಜಯಕುಮಾರ್, ದೀಪಿಕಾ, ಅಧ್ಯಾಪಕ ಮಹಾಲಿಂಗೇಗೌಡ ಮತ್ತಿತರರು ಉಪಸ್ಥಿತರಿದ್ದರು.
ವರದಿ.ಡಾ.ಕೆ.ಆರ್.ನೀಲಕಂಠ , ಕೃಷ್ಣರಾಜಪೇಟೆ , ಮಂಡ್ಯ.