ಮಾನ್ವಿ:ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಮಾನ್ವಿಯಲ್ಲಿ ಮಾಜಿ ಶಾಸಕ ರಾಜಾ ವೆಂಕಟಪ್ಪನಾಯಕ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗು ಸಾರ್ವಜನಿಕ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು.
ಮಾಜಿ ಶಾಸಕ ರಾಜಾ ವೆಂಕಟಪ್ಪನಾಯಕ ಮಾತನಾಡಿ, ಕೇಂದ್ರ ಸಚಿವ ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜ್ಯದ ಜನರಿಗೆ ನಾನಾ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.
ಅದೆ ರೀತಿಯಲ್ಲಿ ರೈತರಿಗೆ ಸಾಲ ಮನ್ನಾ ಮಾಡಿದ ಹೆಗ್ಗಳಿಕೆ ಕುಮಾರಸ್ವಾಮಿ ಅವರಿಗೆ ಸಲ್ಲುತ್ತದೆ ಎಂದರು.ಕುಮಾರಸ್ವಾಮಿ ಅವರಿಗೆ ಆ ದೇವರು ಆಯಸ್ಸು ಆರೋಗ್ಯ ನೀಡಲಿ ಎಂಬ ಕಾರಣಕ್ಕಾಗಿ ರೋಗಗಳಿಗೆ ಹಣ್ಣು ಹಂಪಲು ವಿತರಣೆ ಮಾಡುವ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.