ಮಾನ್ವಿ: ಮಾನ್ವಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅನುದಾನ ದುರ್ಬಳಕೆಯಾಗುತ್ತಿರುವ ಆರೋಪ ಕೇಳಿ ಬಂದಿದ್ದು ಉನ್ನತ ಮಟ್ಟದ ಅಧಿಕಾರಿಗಳನ್ನು ತನಿಖೆ ಮಾಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ನಟರಾಜರಿಂದ ಬಟಾಬಯಲಾಗಿರುವುದು ಬೆಳಕಿಗೆ ಬಂದಿದೆ.
ಮಾನ್ವಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅನುದಾನ ದುರ್ಬಳಕೆಯಾಗುತ್ತಿರುವ ಆರೋಪ ಕೇಳಿ ಬಂದಿದ್ದು ಮಾನ್ವಿ ತಾಲೂಕಿನಲ್ಲಿ ನಡೆಯುತ್ತಿರುವ ಕಾಮಗಾರಿಯ ನಿಯಮಗಳೆ ಬದಲಿಸಿ ಅಧಿಕಾರಿಗಳಿಗೆ ಕೆಲವು ರಾಜಕಾರಣಿಗಳು ಒತ್ತಡ ಏರುತ್ತಿದ್ದು, ಎಸ್ಸಿ,ಎಸ್ಟಿ ಅನುದಾನ ದುರ್ಬಳಕೆಯಾಗುತ್ತಿದೆ ಪ್ರತಿಭಟನೆ ನಡೆಯುತ್ತಿರುವ ಸ್ಥಳದಲ್ಲಿಯೇ ಬಯಲಾಗಿದೆ.
ಮಾನ್ವಿ ಅಭಿವೃದ್ಧಿಯಾಗಬೇಕು,ಆದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಾಂಗಕ್ಕೆ ಮುಟ್ಟಬೇಕಾದ ಅನುದಾನ ಬೇರೆ ಉದ್ದೇಶಕ್ಕಾಗಿ ಬಳಕೆಯಾಗಿರುವುದು ನೋಡಿದರೆ ಉನ್ನತ ಮಟ್ಟದ ಅಧಿಕಾರಿಗಳು ತನಿಖೆ ಮಾಡಬೇಕು ಎಂಬ ಒತ್ತಾಯ ಕೇಳಿ ಬರುತ್ತಿದೆ.