ಮಾನ್ವಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕವಿತಾಳ್ ಪಟ್ಟಣದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಮೈಕ್ರೋ ಯೋಜನೆ ಅಡಿಯಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.
ಮಾನ್ವಿಯ ಕವಿತಾಳ್ ಪಟ್ಟಣದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಮೈಕ್ರೋ ಯೋಜನೆ ಅಡಿಯಲ್ಲಿ ವಿವಿಧ ಕಾಮಗಾರಿಗಳಿಗೆ ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕ ಹಂಪಯ್ಯ ನಾಯಕ್ ಚಾಲನೆ ನೀಡಿದರು. ಪಟ್ಟಣದ ಸಂತೆ ಭಜಾರದಿಂದ ರಾಯಚೂರು ಮತ್ತು ಲಿಂಗಸುಗೂರು ರಸ್ತೆವರೆಗೆ 90ಲಕ್ಷದ ರಸ್ತೆ ನಿರ್ಮಾಣ ಕಾಮಗಾರಿ, ಪಟ್ಟಣದ ಭೋವಿ ಸಮಾಜದ ರುದ್ರಭೂಮಿಗೆ ರಸ್ತೆ ನಿರ್ಮಾಣ 25 ಲಕ್ಷ, ಪಟ್ಟಣದ ಸರ್ಕಾರಿ ಪದವಿಪೂರ್ವ ಪ್ರೌಢಶಾಲೆಗೆ ಎರಡು ಹೆಚ್ಚುವರಿ ಕೊಠಡಿ ನಿರ್ಮಾಣ 34 ಲಕ್ಷ
ಪಟ್ಟಣದ ಅಂಬೇಡ್ಕರ್ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಎರಡು ಹೆಚ್ಚುವರಿ ಕೊಠಡಿ 27 ಲಕ್ಷ ಎಲ್ಲಾ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಕಿರಲಿಂಗಪ್ಪ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಮಾಳಪ್ಪ, ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಕರಿಯಪ್ಪ, ಶಿವಪ್ಪ, ವಕೀಲರು ಪಟ್ಟಣ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರುಗಳು ಮುಖಂಡರುಗಳಾದ ರಾಜೇಶ್ ಬನ್ನಿಗಿಡ, ಶರಣಬಸವ ಅಲ್ಲಮ ಪ್ರಭು, ಅರಿಕೇರಿ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್ ದೊಡ್ಮನಿ, ಕೆ ಆರ್ ಡಿ ಎಲ್ ನ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ ಸಹಾಯಕ ಇಂಜಿನಿಯರ್ ಆದ ರಾಘವೇಂದ್ರ ಇನ್ನಿತರರು ಉಪಸ್ಥಿತರಿದ್ದರು.