ಮಾನ್ವಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾನ್ವಿ ನಗರದಲ್ಲಿ ನೇತಾಜಿ ಶಿಕ್ಷಣ ಸಂಸ್ಥೆಯವರು ಹಮ್ಮಿಕೊಂಡಿರುವ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆಯ ಸಸಿಗೆ ನೀರು ಯರುವುದರ ಮುಖಾಂತರ ಉದ್ಘಾಟಿಸಿದ ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ ಹಂಪಯ್ಯ ನಾಯಕ್ ಇವರು.
ಕನ್ನಡ ಭಾಷೆಯನ್ನು ಕೇವಲ ಬರೆಯುವುದರಲ್ಲಿ ಮತ್ತು ಮಾತನಾಡುವುದರಲ್ಲಿ ಉಳಿಸಿದರೆ ಸಾಲದು ನಮ್ಮ ರಕ್ತದ ಕಣಕಣದಲ್ಲಿಯೂ ಸಹ ಕನ್ನಡ ಎಂಬ ಅಭಿಮಾನ ಮತ್ತು ಸ್ವಾಭಿಮಾನ ಇದ್ದಲ್ಲಿ ಮಾತ್ರ ರಾಜ್ಯೋತ್ಸವದ ಕಾರ್ಯಕ್ರಮಕ್ಕೆ ಒಂದು ಅರ್ಥ ಬರುತ್ತದೆ ಎಂದು ಹೇಳಿದರು.ದೇಶದ ಪ್ರಥಮ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ ಜನ್ಮದಿನವನ್ನು ಮಕ್ಕಳ ದಿನಾಚರಣೆಯನ್ನಾಗಿ ಆಚರಿಸ್ತಾ ಇರುವುದು.
ಇಂದಿನ ಮಕ್ಕಳೆ ಮುಂದಿನ ಪ್ರಜೆಗಳು ಶಿಕ್ಷಕರು ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಸಮಾನವಾದ ಶಿಕ್ಷಣವನ್ನು ಕೊಟ್ಟು ದೇಶದ ಉನ್ನತ ಪ್ರಜೆಯನ್ನಾಗಿ ಮಾಡುವಲ್ಲಿ ಶಿಕ್ಷಣ ಸಂಸ್ಥೆಗಳ ಹಾಗೂ ಶಿಕ್ಷಕರ ಪಾತ್ರ ಬಹುದೊಡ್ಡದು ಎಂದು ಹೇಳಿದರು.
ನೇತಾಜಿ ಶಿಕ್ಷಣ ಸಂಸ್ಥೆಯ ಸುಮರು 25 ವರ್ಷಗಳಿಂದ ಮಾನ್ವಿ ನಗರದಲ್ಲಿ ನಡೆಯುತ್ತಿರುವುದು ತುಂಬಾ ಹೆಮ್ಮೆಯ ವಿಷಯ ಸಂಸ್ಥೆಯು ಇನ್ನೂ ಹೆಮ್ಮರವಾಗಿ ಬೆಳೆಯಲಿ ಎಂದು ತಮ್ಮ ಉದ್ಘಾಟನಾ ಭಾಷಣದಲ್ಲಿ ಶಿಕ್ಷಣ ಸಂಸ್ಥೆಗೆ ನನ್ನ ಹಿಂದಿನ ಅವಧಿಯಲ್ಲಿ ಸಹಾಯವನ್ನು ಮಾಡಿದ್ದೇನೆ ಮುಂದಿನ ದಿನಗಳಲ್ಲಿಯೂ ಸಹ ನನ್ನ ಸಹಾಯ ಮತ್ತು ಸಹಕಾರ ಶಿಕ್ಷಣ ಸಂಸ್ಥೆಗೆ ಇರುತ್ತದೆ ಎಂದು ಅಭಯ ನೀಡಿದರು.
ಈ ಸಂದರ್ಭದಲ್ಲಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಕೆ ನರಸಿಂಹ ಕಾರ್ಯದರ್ಶಿ ವಿಜಯಲಕ್ಷ್ಮಿ ಪಕ್ಷಿಪ್ರೇಮಿ ಸಲ್ಲಾವುದ್ದೀನ್ ಇನ್ನಿತರ ಉಪಸ್ಥಿತರಿದ್ದರು.