Welcome to reportnowtv.in   Click to listen highlighted text! Welcome to reportnowtv.in
Monday, December 2, 2024
HomeSportsRohit Sharma: ರೋಹಿತ್ ಶರ್ಮಾ ಅಭಿಮಾನಿಗಳಿಗೆ ಶಾಕ್ ನೀಡಿದ ಹಿಟ್​ಮ್ಯಾನ್ ಬಾಲ್ಯದ ಕೋಚ್

Rohit Sharma: ರೋಹಿತ್ ಶರ್ಮಾ ಅಭಿಮಾನಿಗಳಿಗೆ ಶಾಕ್ ನೀಡಿದ ಹಿಟ್​ಮ್ಯಾನ್ ಬಾಲ್ಯದ ಕೋಚ್

Rohit Sharma: ಏಕದಿನ ಮಾದರಿಯಲ್ಲಿ ಇನ್ನು ಸ್ವಲ್ಪ ವರ್ಷ ಆಡುವ ಸಲುವಾಗಿ ರೋಹಿತ್ ಶರ್ಮಾ ಟೆಸ್ಟ್​ಗೆ ವಿದಾಯ ಹೇಳಿದರೂ ಹೇಳಬಹುದು. ಆದರೆ, ರೋಹಿತ್ ಶರ್ಮಾ 2027ರ ಏಕದಿನ ವಿಶ್ವಕಪ್ ಆಡಲಿದ್ದಾರೆ ಎಂದು ಭರವಸೆ ನೀಡುತ್ತೇನೆ ಎಂದು ರೋಹಿತ್ ಅವರ ಬಾಲ್ಯದ ಕೋಚ್ ದಿನೇಶ್ ಲಾಡ್ ಹೇಳಿದ್ದಾರೆ.

ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಕಳೆದ ಜೂನ್‌ನಲ್ಲಿ ನಡೆದ ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮತ್ತು. ಈ ಐತಿಹಾಸಿಕ ಗೆಲುವಿನ ನಂತರ ರೋಹಿತ್ ಶರ್ಮಾ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು. ಇದೀಗ ರೋಹಿತ್ ಅವರ ನಿವೃತ್ತಿಯ ಬಗ್ಗೆ ಹೊಸ ಊಹಪೋಹಗಳು ಹುಟ್ಟಿಕೊಂಡಿವೆ.

ವಾಸ ಮುಂದಿನ ವರ್ಷ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯ ನಡೆಯಲಿದೆ. ಈ ಬಾರಿಯೂ ಫೈನಲ್‌ಗೆ ಟೀಂ ಇಂಡಿಯಾ ದೊಡ್ಡ ಸ್ಪರ್ಧಿಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ ರೋಹಿತ್ ಶರ್ಮಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ನಂತರ ಏಕದಿನ ಮತ್ತು ಟೆಸ್ಟ್‌ನಿಂದ ನಿವೃತ್ತಿ ಹೊಂದಬಹುದು ಎಂದು ವದಂತಿ ಎದ್ದಿದೆ.

ಆದರೆ ಈ ವದಂತಿಗಳಿಗೆಲ್ಲ ರೋಹಿತ್ ಶರ್ಮಾ ಅವರ ಬಾಲ್ಯದ ಕೋಚ್ ದಿನೇಶ್ ಲಾಡ್ ದೊಡ್ಡ ಹೇಳಿಕೆ ನೀಡಿದ್ದಾರೆ. ದಿನೇಶ್ ಅವರ ಪ್ರಕಾರ, ‘ರೋಹಿತ್ ಶರ್ಮಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ನಂತರ ನಿವೃತ್ತಿ ಘೋಷಿಸುವ ಸಾಧ್ಯತೆಗಳಿಲ್ಲ. ಆದರೆ ಅದನ್ನು ತಳ್ಳಿಹಾಕುವಂತಿಲ್ಲ. ಏಕೆಂದರೆ ರೋಹಿತ್ ಅವರು ವಯಸ್ಸಿನ ಕಾರಣ ನೀಡಿ ಟೆಸ್ಟ್​ನಿಂದ ದೂರ ಸರಿಯಬಹುದು.

ಅಲ್ಲದೆ ಏಕದಿನ ಮಾದರಿಯಲ್ಲಿ ಇನ್ನು ಸ್ವಲ್ಪ ವರ್ಷ ಆಡುವ ಸಲುವಾಗಿ ರೋಹಿತ್ ಶರ್ಮಾ ಟೆಸ್ಟ್​ಗೆ ವಿದಾಯ ಹೇಳಿದರೂ ಹೇಳಬಹುದು. ಆದರೆ, ರೋಹಿತ್ ಶರ್ಮಾ 2027ರ ಏಕದಿನ ವಿಶ್ವಕಪ್ ಆಡಲಿದ್ದಾರೆ ಎಂದು ಭರವಸೆ ನೀಡುತ್ತೇನೆ ಎಂದು ಅವರ ಬಾಲ್ಯದ ಕೋಚ್ ಹೇಳಿದ್ದಾರೆ.

ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿತ್ತು. ಟೂರ್ನಿಯಲ್ಲಿ ಟೀಂ ಇಂಡಿಯಾ ಸತತ 10 ಪಂದ್ಯಗಳನ್ನು ಗೆದ್ದುಕೊಂಡಿತ್ತು. ಆದರೆ ಪ್ರಶಸ್ತಿ ಪಂದ್ಯದಲ್ಲಿ ಸೋಲಿನ ಶಾಕ್ ಎದುರಿಸಿತ್ತು. ಆದರೆ, ನಾಯಕ ರೋಹಿತ್ ಶರ್ಮಾ ಆಡಿದ 11 ಪಂದ್ಯಗಳಲ್ಲಿ 54.27 ಸರಾಸರಿಯಲ್ಲಿ 597 ರನ್ ಗಳಿಸಿದ್ದರು.

ಇದೀಗ ಏಕದಿನ ವಿಶ್ವಕಪ್‌ನ ಮುಂದಿನ ಆವೃತ್ತಿಯು 3 ವರ್ಷಗಳ ನಂತರ ಅಂದರೆ 2027 ರಲ್ಲಿ ನಡೆಯಲಿದೆ. ಇದರ ಪ್ರಕಾರ ಮುಂದಿನ ವಿಶ್ವಕಪ್ ವೇಳೆಗೆ ರೋಹಿತ್​ಗೆ 39 ವರ್ಷ ತುಂಬಲಿದೆ. ಪಂದ್ಯಾವಳಿ ಸೆಪ್ಟೆಂಬರ್ ಮತ್ತು ನವೆಂಬರ್ ನಡುವೆ ನಡೆದರೆ, ಆಗ ರೋಹಿತ್​ಗೆ 40 ವರ್ಷ ಆಗಿರಲಿದೆ. ಇಂತಹ ಪರಿಸ್ಥಿತಿಯಲ್ಲಿ ರೋಹಿತ್ 2027ರ ವಿಶ್ವಕಪ್ ಆಡಬೇಕೆಂದರೆ ಫಿಟ್ನೆಸ್ ಮೇಲೆ ಸಾಕಷ್ಟು ಶ್ರಮಪಡಬೇಕಾಗುತ್ತದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
Click to listen highlighted text!