ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯ ಮಟ್ಟದ ಬಾಕ್ಸಿಂಗ್ ಕ್ರೀಡಾಕೂಟದ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು.
ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯ ಮಟ್ಟದ ಬಾಕ್ಸಿಂಗ್ ಕ್ರೀಡಾಕೂಟದ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಈ ಸ್ಪರ್ಧೆಯಲ್ಲಿ ಪ್ರೊಗ್ರೆಸ್ಸಿವ್ ಕಾಲೇಜು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ವಿದ್ಯಾರ್ಥಿನಿ ಕುಮಾರಿ ಶಾಲಿನಿ ಗೊಲ್ಲರ್ (69 ಕೆಜಿ) ಚಿನ್ನದ ಪದಕ ಗೆದ್ದು ರಾಷ್ಟ್ರ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ. ಕುಮಾರಿ ಸಂಗೀತಾ ಓಣಿಮನೆ(64 ಕೆಜಿ), ಜ್ಯೋತಿ ಗಾಜಿಪುರ (60 ಕೆಜಿ), ನಾಗರಾಜ ದೇಶಬಂಡಾರಿ (45 ಕೆಜಿ)ಇವರು ಕಂಚಿನ ಪದಕ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿಯ ಅಧ್ಯಕ್ಷರು, ಸದಸ್ಯರು, ಕಾಲೇಜಿನ ಪ್ರಾಚಾರ್ಯರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದರೆ.