ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನವನ್ನು ಸರಳೀಕರಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್‌ಕೆ ಅತೀಕ್ ಮತ್ತು ಕಾರ್ಯದರ್ಶಿ (ವೆಚ್ಚ) ಪಿ ಸಿ ಜಾಫರ್ ಸೇರಿದಂತೆ ಹಣಕಾಸು ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ.
ಸಭೆಯಲ್ಲಿ ರಾಜ್ಯದ ಹಣಕಾಸು ಪರಿಸ್ಥಿತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪರಾಮರ್ಶೆಗೆ ಸಂಬಂಧಪಟ್ಟಂತೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ.
ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯ ಕುಟುಂಬಗಳು ಅನ್ನ ಭಾಗ್ಯ ಯೋಜನೆಯ ಫಲಾನುಭವಿಗಳಾಗಿದ್ದು, ಈ ಹಿನ್ನೆಲೆಯಲ್ಲಿ ನಕಲಿ ಬಿಪಿಎಲ್ ಕಾರ್ಡ್‌ಗಳನ್ನು ತೆಗೆದುಹಾಕುವ ಕಾರ್ಯವನ್ನು ವೇಗಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.
ಗೃಹ ಲಕ್ಷ್ಮಿ ಯೋಜನೆಯಡಿ ರಾಜ್ಯದ ಬೊಕ್ಕಸಕ್ಕೆ ಹೊರೆಯಾಗಿ ಪರಿಣಮಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ನಿಟ್ಟಿನಲ್ಲಿ ಫಲಾನುಭವಿಗಳ ಸಂಖ್ಯೆಯನ್ನು ಕಡಿತಗೊಳಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆಯಾಗಿ ಪರಿಣಮಿಸಿದ್ದು, ಪರಿಹಾರ ಕಂಡು ಕೊಳ್ಳುವುದು ಕಷ್ಟಕರವಾಗಿದೆ. ಆದರೆ, ಸರ್ಕಾರ ಗ್ಯಾರಂಟಿ ಯೋಜನೆಗಳ ಮುಂದುವರೆಸಲು ಬದ್ಧವಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.