ತುಮಕೂರಿನಲ್ಲಿ ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆಯನ್ನ ಸೋಮವಾರ ಆಚರಿಸಬೇಕು ಎಂದು ನಿರ್ಣಯಮಾಡಲಾಗಿತ್ತು, ಆದರೆ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನರಾದ ಕಾರಣ ಜನವರಿ 06ಕ್ಕೆ ಮುಂದೂಡಲಾಗಿದೆ ಎಂದು ಕಾರ್ಯಕ್ರಮ ಆಯೋಜಕರಾದ ಮಾಜಿ ಸೈನಿಕ ನರಸಿಂಹಮೂರ್ತಿ ತಿಳಿಸಿದ್ದಾರೆ.
ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.ಗೃಹ ಸಚಿವ ಡಾ ಜಿ ಪರಮೇಶ್ವರ್ ರವರ ಸಹಕಾರದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನರಾದ ಕಾರಣ ಕಾರ್ಯಕ್ರಮ ಜನವರಿ 06 ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಕಾರ್ಯಕ್ರಮದ ಆಯೋಜಕರಾದ ಮಾಜಿ ಸೈನಿಕ ನರಸಿಂಹಮೂರ್ತಿ ತಿಳಿಸಿದ್ದಾರೆ.ಈ ಹಿಂದೆ ಯಾವ ರೀತಿ ಅಂಬೇಡ್ಕರ್ ಪರಿನಿರ್ವಾಣ ಕಾರ್ಯಕ್ರಮಕ್ಕೆ ಸಹಕಾರ ನೀಡಿದ್ದಿರೊ ಅದೆ ರೀತಿ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.