ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಪ್ರೇಕ್ಷಣೀಯ ಸ್ಥಳಗಳಲ್ಲಿ ಒಂದಾದ ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ದೇವಾಲಯದಲ್ಲಿ ಹೊಸ ವರ್ಷದ ಪ್ರಯುಕ್ತ ವಿಶೇಷ ಪೂಜೆ ಹಮ್ಮಿಕೊಳ್ಳಲಗಿತ್ತು.
ಕರುನಾಡಿನ ಸುಪ್ರಸಿದ್ಧ ಕೊರಟಗೆರೆ ಕ್ಷೇತ್ರದ ಪ್ರಸಿದ್ಧ ಪುಣ್ಯಕ್ಷೇತ್ರ ಕಲ್ಪತರು ನಾಡಿನ ಶ್ರೀಮಹಾಲಕ್ಷ್ಮೀ ಎಂದೇ ಪ್ರಖ್ಯಾತಿ ಪಡೆದಿರುವ
ಗೊರವನಹಳ್ಳಿ ಶ್ರೀಮಹಾಲಕ್ಷ್ಮೀ ದೇವಾಲಯಕ್ಕೆ ಹೊಸ ವರ್ಷದ ಪ್ರಯುಕ್ತ ಬುಧವಾರ ಸಾವಿರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.ಹೊಸ ವರ್ಷದ ಹಿನ್ನೆಲೆ ಶ್ರೀಮಹಾಲಕ್ಷ್ಮೀ ಟ್ರಸ್ಟ್ ವತಿಯಿಂದ ಮುಂಜಾನೆಯಿದಲೇ ಶ್ರೀಮಹಾಲಕ್ಷ್ಮೀ ಅಮ್ಮನವರಿಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ವಿಶೇಷ ಪೂಜೆಗಳು ನಡೆದಿದ್ದು, 35 ಸಾವಿರಕ್ಕೂ ಅಧಿಕ ಭಕ್ತರು ಆಗಮಿಸಿ ಅಮ್ಮನವರ ದರ್ಶನ ಪಡೆದಿದ್ದು, ಭಕ್ತರಿಗೆ ನೂತನ ದಾಸೋಹ ಭವನದಲ್ಲಿ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.