ಕೊರಟಗೆರೆ ಮತ್ತು ದೊಡ್ಡಬಳ್ಳಾಪುರದ 5ಸಾವಿರ ಎಕರೆ ಪ್ರದೇಶದಲ್ಲಿ ಬಫರ್ ಡ್ಯಾಂ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದ್ದು, ಇದಕ್ಕೆ ರೈತರು ತೀವ್ರ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.
ಕೊರಟಗೆರೆ ಮತ್ತು ದೊಡ್ಡಬಳ್ಳಾಪುರದ 5ಸಾವಿರ ಎಕರೆ ಪ್ರದೇಶದಲ್ಲಿ ಬಫರ್ ಡ್ಯಾಂ ನಿರ್ಮಾಣ ಮಾಡುತ್ತಿರುವುದಕ್ಕೆ ರೈತರು ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದು, ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಿರ್ಮಾಣ ಮಾಡಬೇಕಿದ್ದ ಬಫರ್ ಡ್ಯಾಂ ಇದೀಗ ಕೊರಟಗೆರೆಯಲ್ಲಿ ನಿರ್ಮಾಣ ಮಾಡುವುದು ಎಷ್ಟು ಸರಿ ಎಂದು ರೈತರು ಪ್ರಶ್ನಿಸುತ್ತಿದ್ದಾರೆ.
ಜಿಲ್ಲಾಧಿಕಾರಿಗಳ ಮುಂದೆಯೇ ಡ್ಯಾಂ ಕಾಮಗಾರಿಗೆ ರೈತರು ವಿರೋಧ ಹೊರಹಾಕಿದ್ದು, ಇದರಿಂದ ನಮ್ಮ ಕುಟುಂಬ ಬೀದಿಪಾಲು ಆಗುತ್ತೆ, ಹಾಗಾಗಿ ಗುದ್ದಲಿ ಪೂಜೆಗೂ ಸಹ ಅಡ್ಡಿ ಪಡಿಸುವುದಾಗಿ ಎಂದು ಅಳಲು ತೋಡಿಕೊಂಡಿದ್ದಾರೆ.