ಯಾದಗಿರಿ : ಜಿಲ್ಲೆಯ ಸುರಪುರ ತಾಲೂಕಿನ ಬೋನಾಳ ಗ್ರಾಮದಲ್ಲಿ ಟಿಪ್ಪು ಸುಲ್ತಾನ್ ರ 275 ನೇ ಜಯಂತಿಯನ್ನು ಆಚರಿಸಲಾಯಿತು.
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಬೋನಾಳ ಗ್ರಾಮದಲ್ಲಿ ಟಿಪ್ಪು ಸುಲ್ತಾನ್ ರ 275 ನೇ ಜಯಂತಿಯನ್ನು ಆಚರಿಸಲಾಯಿತು. ಟಿಪ್ಪು ಸುಲ್ತಾನ್ ರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಧ್ವಜಾರೋಹಣ ಮಾಡುವ ಮೂಲಕ ಉದ್ಘಾಟಿಸಲಾಯಿತು.
ಈ ಸಂದರ್ಭದಲ್ಲಿ ಹಜರತ್ ಟಿಪ್ಪು ಸುಲ್ತಾನರ ಕುರಿತು ರಾಹುಲ್ ಹುಲಿಮನಿ, ಮತ್ತು ರಾಮು ನಾಯಕ ಮಾತನಾಡಿ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಬೇಕೆಂದು ಹೇಳಿದರಲ್ಲದೆ, ಕಬ್ಬಡಿ ಪಂದ್ಯಾವಳಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಇಬ್ಬರು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಮಹಾಂತೇಶ್ ದೇವರ ಗೋನಾಲ ಮಾತನಾಡಿ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಿ ಎಂದು ಹೇಳಿದರು, ಈ ಸಂದರ್ಭದಲ್ಲಿ ಗ್ರಾಮಸ್ಥರು, ಹಾಗೂ ವಿವಿಧ ಸಂಘಗಳ ಕಾರ್ಯಕರ್ತರು, ಯುವಕರು, ಮಹಿಳೆಯರು, ಉಪಸ್ಥಿತರಿದ್ದರು.